Karnataka Guest Teacher Recruitment 2021-2022 | Apply for 18000 Vacant Posts | Latest Notification Dated November 04th 2021

By Admin
0

Appointment of Primary Guest teachers for 18000 Vacant Posts in Karnataka State Government Schools for the year 2021-2022.

2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ à²¶ಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ à²¶ೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು à²¨ೇಮಕ ಮಾಡಿಕೊಳ್ಳುವ ಬಗ್ಗೆ

ಉಲ್ಲೇಖ:- 1 ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ ಆಇ 403 ವೆಚ್ಚ-8/ à²¦ಿನಾಂಕ 04.11.2021.

2, ಈ ಕಛೇರಿ ಸುತ್ತೋಲೆ ಸಂಖ್ಯೆ ಸಿ3(1) ಪ್ರಾಶಿ ವೃಬ. ಜಿಲ್ಲಾವಾರು à²¹ಂಚಿಕೆ 17-18 ದಿನಾಂಕ 02.02.2018

3, ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲೆಗಳ ಉಪನಿರ್ದೆಶಕರುಗಳಿಂದ à²¸್ವೀಕೃತವಾದ ಕೋರಿಕೆಯಂತೆ

 à²•à²°್ನಾಟಕ à²¸à²°್ಕಾರ à²¸ಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ, ನೃಪತುಂಗ ರಸ್ತೆ, ಬೆಂಗಳೂರು.

ಸಂಖ್ಯೆ:ಸಿ3[1]ಪ್ರಾ.ಶಿ: ಅ.ಶಿ. ನೇ.01/2021-22 à²¦ಿನಾಂಕೆ (14.11.2021)

ಜ್ಞಾಪನಾ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ à²¶ಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೆಪ್ಟೆಂಬರ್-2021 ರಿಂದ ಮಾರ್ಚ್ 2022 à²°à²µà²°ೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದರೆಗೆ ಇವರೆಡರಲ್ಲಿ ಯಾವುದು ನಂತರವೂ ಅಲ್ಲಿಯವರೆಗೆ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು- 18000 ಅತಿಥಿ à²¶ಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉಲ್ಲೇಖ 01 ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯು ಸಹಮತಿ à²¨ೀಡಲಾಗಿದೆ.

ಉಲ್ಲೇಖ 02 à²° ಸುತ್ತೋಲೆಯಲ್ಲಿ ರಾಜ್ಯದ à²¸à²°್ಕಾರ ಪ್ರಾಥಮಿಕ ಶಾಲೆಗಳಿಗೆ ವೃಂದ ಬಲ à²¨ಿಗದಿಗೊಳಿಸಿರುವ ಸರ್ಕಾರದ ಆದೇಶದ ಕ್ರಮಗಳನ್ನು ಮತ್ತು ಇಲಾಖಾ ಅಧಿಸೂಚನೆಯಲ್ಲಿನ ಸೂಚನೆಗಳನ್ನು à²ªಾಲಿಸಿ ಪ್ರತಿ ಶಾಲೆಗೆ ಅಗತ್ಯವಿರುವ ಶಿಕ್ಷಕರ ಹುದ್ದೆಗಳ ಕುರಿತಂತೆ, ಶಾಲಾವಾರು ವೃಂದ ಮಂಜೂರಾತಿ à²•್ರಮಗಳನ್ನು ಈಗಾಗಲೇ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿರುತ್ತದೆ.

ಸದರಿ ಆಧಾರದಲ್ಲಿ ಎಲ್ಲಿ ಅಗತ್ಯ ಖಾಲಿ ಹುದ್ದೆಗಳಿವೆಯೋ ಅಂತಹ ಖಾಲಿ ಹುದ್ದೆಗಳಲ್ಲಿ ಅತಿಥಿ à²¶ಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಪ್ರಸ್ತುತ ಲಭ್ಯವಿರುವ ಖಾಲಿ ಹುದ್ದೆಗಳ ಮಾಹಿತಿಯನ್ನಾಧರಿಸಿ, à²²à²—ತ್ತಿಸಲಾಗಿರುವ ಅನುಬಂಧದಲ್ಲಿರುವಂತೆ ಜಿಲ್ಲಾವಾರು/ಹಾಲ್ಲೂಕುವಾರು ಹಂಚಿಕೆ ಮಾಡಲಾಗಿದೆ. à²µà²°್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಖಾಲಿ ಹುದ್ದೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ à²¹ಾಜರಾದ ಕೂಡಲೇ, ಅತಿಥಿ ಶಿಕ್ಷಕರನ್ನು ಸಂಬಂಧಪಟ್ಟ ಶಾಲೆಯಿಂದ ಬಿಡುಗಡೆ ಮಾಡಿ ತಾಲ್ಲೂಕಿನ ಒಳಗೆ à²…ಗತ್ಯ ಖಾಲಿ ಹುದ್ದೆ ಇರುವ ಶಾಲೆಯಲ್ಲಿ ಮುಂದುವರಿಸಲು ನಿಯಮಾನುಸಾರ ಸಂಬಂಧಪಟ್ಟ ಕ್ಷೇತ್ರ à²¶ಿಕ್ಷಣಾಧಿಕಾರಿಗಳು ಕ್ರಮವಹಿಸಲು ಸೂಚಿಸಿದೆ,

ಕೆಳಕಂಡ ಷರತ್ತುಗಳಿಗೆ ಒಳಪಡಿಸಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದೆ.

1. ಉಪನಿರ್ದೇಶಕರು ಈ ಕಛೇರಿಗೆ ಸಲ್ಲಿಸಿರುವ ಶಾಲ್ಲೂಕುವಾರು ಅತಿಥಿ ಶಿಕ್ಷಕರ ಬೇಡಿಕೆಯನ್ನಾಧರಿಸಿ à²…ಗತ್ಯವಿರುವ ಹುದ್ದೆಗಳ ಸಂಖ್ಯೆಯನ್ನು ಹಂಚಿಕೆ ಮಾಡಲಾಗಿದ್ದು, ಖಾಲಿ ಇರುವ ಅಗತ್ಯ ಹುದ್ದೆಗಳಿಗೆ à²®ಾತ್ರ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ಅಗತ್ಯ ಕ್ರಮವಹಿಸುವುದು.

2, ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ à²ª್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.

3, ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ à²¹ುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯ ಖಾಲಿ à²¹ುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.












Click Here to Join Telegram Channel

Post a Comment

0Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!