ಕರ್ನಾಟಕ ಗೃಹ ಲಕ್ಷ್ಮಿ ಯೋಜನೆ 2023 Details | Karnataka Gruhalakshmi Scheme Application Details and Features

By Admin
0

ಗೃಹಲಕ್ಷ್ಮೀ ಯೋಜನೆ: ಮನೆಯ ಯಜನಮಾನಿಗೆ ತಿಂಗಳಿಗೆ 2 ಸಾವಿರ ರೂ. ಒದಗಿಸುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಇದಕ್ಕೆ ಬ್ಯಾಂಕ್ ಖಾತೆ,ಆಧಾರ್ ಕಾರ್ಡ್ ಒದಗಿಸಬೇಕಿದೆ. ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಜು.15ರಿಂದ ಆಗಸ್ಟ್ 15ರವರೆಗೆ ಈ ಪ್ರಕ್ರಿಯೆಯನ್ನು ಸಂಪೂರ್ಣ ಪೂರ್ಣಗೊಳಿಸಿ ಸ್ವಾತಂತ್ರೋತ್ಸವ ದಿನವಾದ ಆ.15ರಂದು ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.


ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ದಾರರೆಲ್ಲರಿಗೂ ನೀಡಲಾಗುತ್ತದೆ. ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆ ಅಡಿ ಪಿಂಚಣಿ ಪಡೆಯುತ್ತಿರುವವರ ಪಿಂಚಣಿಯ ಜೊತೆಗೆ ಈ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂ.ಹಣವೂ ಅವರ ಕೈ ಸೇರಲಿದ್ದು,ಯಾವುದನ್ನು ಕಡಿತಗೊಳಿಸುವ ಪ್ರಶ್ನೆಯೇ ಇಲ್ಲ. ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಸಾಪ್ಪವೇರ್‌ವೊಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಮನೆಯ ಯಜಮಾನಿ ಯಾರು ಎಂಬುದನ್ನು ಆ ಕುಟುಂಬದವರೇ ನಿರ್ಧರಿಸಿಕೊಳ್ಳಬೇಕು ಎಂದರು.

Karnataka Gruhalakshmi Scheme Features

  1. ಜೂ. 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕು
  2. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದು
  3. ಆಗಸ್ಟ್ 15ರಂದು ಯಜಮಾನಿ ಖಾತೆಗೆ ಹಣ ಜಮಾ 
  4. ಯಜಮಾನಿಯನ್ನು ಕುಟುಂಬಸ್ತರೇ ನಿರ್ಧರಿಸಬೇಕು 


Click Here to Join Telegram Channel

Post a Comment

0Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!